Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಡಿತರ ಚೀಟಿ ವಿತರಿಸುವ ಯೋಜನೆ ಆರಂಭಿಸಿದ್ದು, ದೇಶದ ಬಡವರೂ ನೆಮ್ಮದಿಯಾಗಿ ಮೂರು ಹೊತ್ತು ಊಟ ಮಾಡುವಂತಾಗಿದ್ದು, ಕೋಟ್ಯಂತರ ಜನರಿಗೆ ಅನುಕೂಲವಾಗುತ್ತಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಡವರಿಗೆ ಎರಡು ರೀತಿಯ ಪಡಿತರ ಚೀಟಿ ವಿತರಿಸಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್ ಪಡಿತರ ಚೀಟಿ ಮತ್ತು ಬಡತನ ರೇಖೆಗಿಂತ ಮೇಲಿನವರಿಗೆ ಎಪಿಎಲ್ ಪಡಿತರ ಚೀಟಿ ವಿತರಿಸಲಾಗುತ್ತದೆ.
ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಹಲವು ಸವಲತ್ತುಗಳು ಸಿಗುತ್ತವೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಆಹಾರ ಧಾನ್ಯಗಳು, ಉಚಿತ ಆರೋಗ್ಯ ಸೇವೆ, ಸರ್ಕಾರದ ಸವಲತ್ತು ಮತ್ತು ಇತರ ಹಲವು ಸೇವೆಗಳು ಲಭ್ಯವಿವೆ.
ಈ ಕಾರಣಕ್ಕಾಗಿ ಬಡವರು ಪಡಿತರ ಚೀಟಿ ಮಾಡಿಸಿ ಸರ್ಕಾರದ ಸವಲತ್ತು ಪಡೆಯಲು ಪ್ರಯತ್ನಿಸುತ್ತಾರೆ. ಆದರೆ, ನಮ್ಮ ದೇಶದಲ್ಲಿ ಎಲ್ಲಾ ಅರ್ಹರು ಬಿಪಿಎಲ್ ಪಡಿತರ ಚೀಟಿ ಪಡೆಯುವುದಿಲ್ಲ. ಕೆಲವರು ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಮಾಡಿಕೊಂಡಿದ್ದಾರೆ.
ಪಡಿತರ ಚೀಟಿ ವಿತರಣೆಯಲ್ಲಿ ಆಗಿರುವ ಕೆಲವು ದೋಷಗಳಿಂದ ಕೆಲವೊಮ್ಮೆ ಕುಟುಂಬದ ಕೆಲವರ ಹೆಸರು ಪಡಿತರ ಚೀಟಿಯಲ್ಲಿ ನಾಪತ್ತೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಸಿಗದೆ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈ ಕಾರಣಕ್ಕೆ ಪಡಿತರ ಚೀಟಿಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲು ಸರಕಾರ ಅನುಮತಿ ನೀಡುತ್ತದೆ.
ಅದರಂತೆ ಕೆಲವರು ಪಡಿತರ ಚೀಟಿಗೆ ಹೆಸರು ಸೇರಿಸಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇದೀಗ ಪಡಿತರ ಚೀಟಿಗೆ ಹೆಸರು ಸೇರ್ಪಡೆಯಾದವರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯನ್ನು ಪರಿಶೀಲಿಸಿ, ಅದರಲ್ಲಿ ನಿಮ್ಮ ಹೆಸರಿದೆಯೇ? ಅದರ ಬಗ್ಗೆ ನೀವು ತಿಳಿದುಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಅದನ್ನು ಪರಿಶೀಲಿಸುವುದು ಹೇಗೆ ಎಂದು ತಿಳಿಯಿರಿ.
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕಾರಿಗೆ ಭೇಟಿ ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ವೆಬ್‌ಸೈಟ್.
ಕರ್ನಾಟಕ ಪಡಿತರ ಚೀಟಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-
– ಮೊದಲು, ಇಲ್ಲಿ ನೀಡಿರುವ ಅಧಿಕೃತ ವೆಬ್‌ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ
– ಮೆನು ಬಾರ್‌ನಿಂದ, “ಇ-ಸೇವೆಗಳು” ಟ್ಯಾಬ್ ಅನ್ನು ಕ್ಲಿಕ್ ಮಾಡಿ.
– “ಇ-ರೇಷನ್ ಕಾರ್ಡ್” ಲಿಂಕ್ ಅನ್ನು ಕ್ಲಿಕ್ ಮಾಡಿ.
– “ಗ್ರಾಮ ಪಟ್ಟಿ” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
– ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
* ಜಿಲ್ಲೆ
* ತಾಲ್ಲೂಕು
* ಗ್ರಾಮ ಪಂಚಾಯಿತಿ
* ಗ್ರಾಮ
– “ಹೋಗಿ” ಬಟನ್ ಕ್ಲಿಕ್ ಮಾಡಿ.
– ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.